ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ , ರಾಜ್ಯ, ರಾಷ್ಟ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಬದಲಾವಣೆ ತರಲು ಮತ್ತು ಜನಪರ ಬದಲಾವಣೆ ತರಲು ಈಗ ಇಂಡಿಯನ್ ಮೂಮೆಂಟ್ ಪಾರ್ಟಿ ಮುಂದಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮಹದೇವ ಉದಾಂವಿ ಹೇಳಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಎಲ್ಲ ಜಿಲ್ಲೆಯಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸೆ. 22ರಂದು ಧಾರವಾಡ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಲಾಗುತ್ತದೆ. ಜಿಲ್ಲಾಧ್ಯಕ್ಷರಾಗಿ ಸರಫರಾಜ ಇಬ್ರಾಹಿಂ, ಉಪಾಧ್ಯಕ್ಷರಾಗಿ ಮಹೇಶ ಪೋಳ, ಜಿಲ್ಲಾ ಕಾರ್ಯದರ್ಶಿಯಾಗಿ ಬಸವರಾಜ ರಾಜಾಪುರೆ, ಹುಬ್ಬಳ್ಳಿ ಶಹರ ಅಧ್ಯರನ್ನಾಗಿ ಸುಲೇಮಾನ ಸಾಧಿಕ, ಉಪಾಧ್ಯಕ್ಷರಾಗಿ ಜಾವೇದಖಾನ್ ಗೋರಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದರು.
Kshetra Samachara
22/09/2021 02:33 pm