ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸಲೆಂದು ಪ್ರತಿಭಟನೆಗಿಳಿದ ಆಶಾ ಕಾರ್ಯಕರ್ತೆಯರು

ಹುಬ್ಬಳ್ಳಿ: ಕನಿಷ್ಠ ವೇತನ 21 ಸಾವಿರ ಮಾಡುವುದು ಸೇರಿದಂತೆ, ಇನ್ನಿತರ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿರ ಫೆಡರೇಶನ್ ಎಐಟಿಯುಸಿ, ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ ಸಿಐಟಿಯು ಹುಬ್ಬಳ್ಳಿ ತಾಲೂಕು ಸಮಿತಿಗಳ ಸದಸ್ಯರು ನಗರದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಾದ್ಯಂತ 80 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, 1.20 ಲಕ್ಷ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಈವರೆಗೆ ಗೌರವಧನ ಮಾತ್ರ ನೀಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ ಸೇರಿದಂತೆ ಜೀವನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಸರ್ಕಾರ ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ 21 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

24/09/2021 12:37 pm

Cinque Terre

60.43 K

Cinque Terre

5

ಸಂಬಂಧಿತ ಸುದ್ದಿ