ಧಾರವಾಡ: 21 ಸಾವಿರ ಕನಿಷ್ಠ ವೇತನ ಜಾರಿ ಮಾಡುವುದು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿರ ಫೆಡರೇಷರನ್ ಎಐಟಿಯುಸಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ಸಂಘಟನೆಗಳ ಸದಸ್ಯೆಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರ ಪ್ರತಿಭಟನೆ ನಡೆಸಿದರು.
ರಾಜ್ಯದಾದ್ಯಂತ 80 ಸಾವಿರ ಅಂಗನವಾಡಿ ಕೇಂದ್ರಗಳಿವೆ. 1.20 ಲಕ್ಷ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಈವರೆಗೆ ಗೌರವಧನ ಮಾತ್ರ ನೀಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ ಸೇರಿ ಜೀವನ ನಡೆಸುವುದು ಕಷ್ಟ. ಹೀಗಾಗಿ, ಸರ್ಕಾರ ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ 21 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.
ಸ್ವತಃ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರೇ ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು.
ಬೇಸಿಗೆ ರಜೆಯ ಅವಧಿಯನ್ನು ಒಂದು ತಿಂಗಳಿಗೆ ಹೆಚ್ಚಿಸಬೇಕು. ವೇತನ ಸಹಿತ ರಜೆ ನೀಡಬೇಕು, ಇಎಸ್‌ಐ, ಪಿಂಚಣಿ ಮೊತ್ತ ಹೆಚ್ಚಳ, ಜೀವವಿಮೆ ಸೌಲಭ್ಯಗಳನ್ನು ಒದಗಿಸಬೇಕೆಂಬುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Kshetra Samachara
24/09/2021 04:38 pm