ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಿಂತೆಗೀಡು ಮಾಡಿದ ಚಿರತೆ: ಶಾಲೆಗಳಿಗೆ ರಜೆ ನೀಡಿ

ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದ ಹಿನ್ನೆಲೆಯಲ್ಲಿ ಆ ಭಾಗದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಬೇಕು ಹಾಗೂ ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರುಗಳಿಗೆ ರಜೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿಗಳ ಹಾಗೂ ಶಿಕ್ಷಕರುಗಳ ಸುರಕ್ಷತಾ ಹಿತದೃಷ್ಟಿಯಿಂದ ಕವಲಗೇರಿ ಗ್ರಾಮದಲ್ಲಿರುವ ಹಾಗೂ ಸುತ್ತಲಿನ ಗ್ರಾಮಗಳ ಶಾಲೆಗಳಿಗೆ ರಜೆ ನೀಡಬೇಕು. ಅದೇ ರೀತಿ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ರಜೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಧಾರವಾಡ ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷ ಅಜೀತ್ ಕುಮಾರ್ ದೇಸಾಯಿ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಗೌರವಾಧ್ಯಕ್ಷ ಎಸ್.ಬಿ.ಕೇಸರಿ, ಪದಾಧಿಕಾರಿ ಎಂ.ಜಿ.ಕುದ್ದುನವರ ಆರ್.ಬಿ ಮುನ್ನವಳ್ಳಿ, ಬಿ.ಎಸ್.ಪಾಟೀಲ್ ಸೇರಿದಂತೆ ಹಲವರು ಇದ್ದರು.

Edited By : Nagesh Gaonkar
Kshetra Samachara

Kshetra Samachara

24/09/2021 08:13 pm

Cinque Terre

35.48 K

Cinque Terre

0

ಸಂಬಂಧಿತ ಸುದ್ದಿ