ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆ.27 ರಂದು ಕರೆ ನೀಡಲಾಗಿರುವ ಭಾರತ ಬಂದ್ಗೆ ಧಾರವಾಡದಲ್ಲೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.
ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಭಾರತ ಬಂದ್ಗೆ ಧಾರವಾಡದಲ್ಲಿ ಬೆಂಬಲ ಸೂಚಿಸಲಾಗಿದೆ.
ಇದರ ಜೊತೆಗೆ ಸಿಎಫ್ಡಿಐ, ರೈತ ಸೇನಾ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಆರ್ಕೆಎಸ್, ಸಿಟಿಜನ್ ಫಾತ್ ಡೆಮಾಕ್ರಸಿ, ಲಿಡ್ಕರ್ ಸಂಘ, ಡಿಎಸ್ಎಸ್ ಸೇರಿದಂತೆ ಹಲವು ಸಂಘಟನೆಗಳು ಭಾರತ ಬಂದ್ಗೆ ಬೆಂಬಲ ಸೂಚಿಸಿವೆ.
ಈ ಎಲ್ಲ ಸಂಘಟನೆಗಳ ಸದಸ್ಯರು ಭಾರತ ಬಂದ್ ದಿವಸ ಬೆಳಿಗ್ಗೆ 6 ಗಂಟೆಯಿಂದಲೇ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯಲಿದೆ.
Kshetra Samachara
25/09/2021 06:15 pm