ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಸ್‌ ಅಡ್ಡಗಟ್ಟಿ ಪ್ರತಿಭಟನೆ: ಧಾರವಾಡದಲ್ಲಿ ಕಾವು ಪಡೆದುಕೊಳ್ಳುತ್ತಿದೆ ಬಂದ್

ಧಾರವಾಡ: ಭಾರತ ಬಂದ್‌ ಧಾರವಾಡದಲ್ಲಿ ಕ್ರಮೇಣ ಕಾವು ಪಡೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಈ ಬಂದ್‌ಗೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ನಸುಕಿನಜಾವವೇ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಂದ್ ಹಿನ್ನೆಲೆಯಲ್ಲೂ ರಸ್ತೆಗಿಳಿದ ಸಾರಿಗೆ ಸಂಸ್ಥೆ ಬಸ್‌ಗೆ ಪ್ರತಿಭಟನಾಕಾರರು ಅಡ್ಡ ಮಲಗಿ ಪ್ರತಿಭಟನೆ ನಡೆಸಿದರು. ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳ ಕಾರ್ಯಕರ್ತರು, ಆ ಮಾರ್ಗವಾಗಿ ಹೋಗುವ ಎಲ್ಲಾ ವಾಹನಗಳನ್ನು ಒತ್ತಾಯಪೂರ್ವಕವಾಗಿ ತಡೆಯುತ್ತಿದ್ದಾರೆ. ಆದರೆ, ಇದಕ್ಕೆ ಅವಕಾಶ ಕೊಡದ ಪೊಲೀಸರು ರಸ್ತೆ ಬಂದ್ ಮಾಡದಂತೆ ಪ್ರತಿಭಟನಾಕಾರರಿಗೆ ಎಚ್ಚರಿಕೆಯನ್ನೂ ನೀಡುತ್ತಿದ್ದಾರೆ.

ಬಂದ್‌ ಹಿನ್ನೆಲೆಯಲ್ಲಿ ಡಿಸಿಪಿ ರಾಮರಾಜನ್‌ ಕೂಡ ಧಾರವಾಡದ ಜ್ಯುಬಿಲಿ ವೃತ್ತಕ್ಕೆ ಬಂದು ಪರಿಸ್ಥಿತಿ ಅವಲೋಕಿಸಿದ್ದಾರೆ. ಎಸಿಪಿ ಅನುಷಾ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರತಿಭಟನಾಕಾರರು ತಮಗೆ ಪ್ರತಿಭಟನೆ ಮಾಡಲು ಅವಕಾಶ ಮಾಡಿಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ ಪ್ರಸಂಗವೂ ಜರುಗಿತು.

Edited By : Shivu K
Kshetra Samachara

Kshetra Samachara

27/09/2021 11:00 am

Cinque Terre

38.43 K

Cinque Terre

8

ಸಂಬಂಧಿತ ಸುದ್ದಿ