ಧಾರವಾಡ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕರೆ ನೀಡಲಾಗಿರುವ ಭಾರತ ಬಂದ್ ಗೆ ಧಾರವಾಡದಲ್ಲೂ ಬೆಂಬಲ ದೊರೆತಿದೆ.
ಕೆಲವು ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆ ಕೇವಲ ಜ್ಯುಬಿಲಿ ವೃತ್ತಕ್ಕೆ ಮಾತ್ರ ಸೀಮಿತವಾಗಿದೆ. ಜ್ಯುಬಿಲಿ ವೃತ್ತವನ್ನು ಹೊರತುಪಡಿಸಿದರೆ, ಬಾಕಿ ಎಲ್ಲ ಕಡೆ ಧಾರವಾಡದಲ್ಲಿ ಎಂದಿನಂತೆ ಕಾರ್ಯ ಚಟುವಟಿಕೆಗಳು ನಡೆದಿವೆ.
ಈ ಭಾರತ ಬಂದ್ ಗೆ ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರಿಗೆ ಬಸ್ಸುಗಳು, ಸಿನಿಮಾ ಮಂದಿರಗಳು, ಪೆಟ್ರೋಲ್ ಬಂಕ್ಗಳು, ಅಂಗಡಿ, ಮುಂಗಟ್ಟುಗಳು ಎಂದಿನಂತೆ ಕಾರ್ಯಾರಂಭ ಮಾಡಿವೆ.
ಕೆಲ ರೈತ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳು ಕೇವಲ ಜ್ಯುಬಿಲಿ ವೃತ್ತ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Kshetra Samachara
27/09/2021 12:50 pm