ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರೆ ನೀಡಲಾಗಿರುವ ಭಾರತ ಬಂದ್‌ಗೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿವೆ.
ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕೂಡ ಬಂದ್‌ಗೆ ಬೆಂಬಲ ಸೂಚಿಸಿ ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ಎಮ್ಮೆಯನ್ನು ಕರೆತರುವ ಮೂಲಕ ಗಮನಸೆಳೆದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
Kshetra Samachara
27/09/2021 02:09 pm