ನವಲಗುಂದ : ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷಾತೀತ ಹೋರಾಟ ಸಮಿತಿ ವತಿಯಿಂದ ಇಂದು ನಡೆದ ಭಾರತ್ ಬಂದ್ ಗೆ ಪಟ್ಟಣದ ಲಿಂಗರಾಜ ವೃತ್ತದಲ್ಲಿನ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯುವ ಮೂಲಕ ಸಂಪೂರ್ಣ ಬೆಂಬಲವನ್ನು ಸೂಚಿಸಿದರು.
ಹೌದು ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷಾತೀತ ಹೋರಾಟದ ರೈತ ಹೋರಾಟಗಾರರು ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ನ್ಯಾಯಾಲಯದ ತೀರ್ಪಿನಂತೆ ತಕ್ಷಣವೇ ಕೆಲಸ ಆರಂಭವಾಗಬೇಕು ಮತ್ತು ದೆಹಲಿಯಲ್ಲಿ ವಿವಿಧ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಸರ್ಕಾರ ರೈತ ಕುಲಕ್ಕೆ ಎಪಿಎಂಸಿ ಕಾಯ್ದೆಗಳನ್ನು ಮರಣ ಶಾಸನವಾಗಿಸಿದೆ. ಈ ಹಿನ್ನೆಲೆ ಪ್ರಧಾನ ಮಂತ್ರಿಗಳು ದೆಹಲಿಯಲ್ಲಿ ಹೋರಾಟಗಾರರನ್ನು ಮಾತು ಕತೆಯೊಂದಿಗೆ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರೈತ ಮುಖಂಡರಾದ ಸುಭಾಷ್ ಚಂದ್ರ ಗೌಡ ಪಾಟೀಲ್ ಅವರು ತಹಶೀಲ್ದಾರ್ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
27/09/2021 05:58 pm