ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜವಳಿ ಮತ್ತು ಕೈಮಗ್ಗ ಇಲಾಖೆಯಲ್ಲಿ 10 ಲಕ್ಷ ಜನರಿಗೆ ಉದ್ಯೋಗ

ಧಾರವಾಡ: ಜವಳಿ ಮತ್ತು ಕೈಮಗ್ಗ ಇಲಾಖೆಯಲ್ಲಿ ಸುಮಾರು 10 ಲಕ್ಷ ಜನರಿಗೆ ಉದ್ಯೋಗ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ಕೈಮಗ್ಗ, ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬಂದ ಮೇಲೆ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ನೇಕಾರರ ಪರವಾಗಿ ಕೆಲಸ ಮಾಡಿದ್ದಾರೆ. ಸುಮಾರು 112 ಕೋಟಿ ರೂಪಾಯಿ ನೇಕಾರರ ಸಾಲ ಮನ್ನಾ ಕೂಡ ಮಾಡಲಾಗಿದೆ. ಕೈಮಗ್ಗ ನೇಕಾರರ ಪುನಶ್ಚೇತನವಾಗಬೇಕು ಎಂಬ ಉದ್ದೇಶದಿಂದ ನನ್ನ ಇಲಾಖೆಯಲ್ಲಿ 10 ಲಕ್ಷ ಜನರಿಗೆ ಉದ್ಯೋಗ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.

ನಾಳೆ ಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಉತ್ತರ ಕರ್ನಾಟಕ ಭಾಗದ ಎಲ್ಲ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ಕರೆದಿದ್ದೇನೆ. ಈ ಭಾಗದಲ್ಲಿ ಬಹಳಷ್ಟು ಜನ ನೇಕಾರರು ಇರುವುದರಿಂದ ನೇಕಾರರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

Edited By : Nagesh Gaonkar
Kshetra Samachara

Kshetra Samachara

27/09/2021 06:02 pm

Cinque Terre

97.63 K

Cinque Terre

4

ಸಂಬಂಧಿತ ಸುದ್ದಿ