ಹುಬ್ಬಳ್ಳಿ: ಎರಡು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಅಲ್ಲದೇ ಈಗಾಗಲೇ ಭಾರತೀಯ ಜನತಾ ಪಕ್ಷ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದು, ಉಪಚುನಾವಣೆಯಲ್ಲಿ ಕೂಡ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಉಪ ಚುನಾವಣೆಗೆ ನಾವು ಯಾವಾಗಿನಿಂದಲೂ ಸಿದ್ಧತೆಯಲ್ಲಿದ್ದೇವೆ. ಧಾರವಾಡ ಕೋರ್ ಕಮೀಟಿಯಲ್ಲಿಯೂ ಕೂಡ ಇದರ ಬಗ್ಗೆ ಚರ್ಚೆಯಾಗಿದೆ. ಇದುವರೆಗೂ ಅಭ್ಯರ್ಥಿ ಪೈನಲ್ ಆಗಿಲ್ಲ ದಾವಣಗೆರೆಯಲ್ಲಿಯೂ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿಲ್ಲ. ಕೋರ್ ಕಮೀಟಿಯಲ್ಲಿ ಉಸ್ತುವಾರಿ ಬಗ್ಗೆ ಚರ್ಚೆಯಾಗಿದೆ ಎಂದರು.
ಸಿಎಂ ಬಸವರಾಜ ಬೊಮ್ಮಾಯಿಯವರ ಸಾಮೂಹಿಕ ನಾಯಕತ್ವದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹೌದು..ನಾವೆಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರ ಹೇಳಿಕೆಗೆ ಮಾಜಿ ಸಿಎಂ ಸಮ್ಮತಿ ಸೂಚಿಸಿದರು.
ಇನ್ನೂ ಶೆಟ್ಟರ್ ಅವರು ಸಿಎಂ ಅವರಿಂದ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ ಎಂಬುವಂತ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಮೊನ್ನೆ ನಾನು ಅವರು ಬೆಳಗಾವಿಯಲ್ಲಿ ಒಂದೇ ವೇದಿಕೆಯಲ್ಲಿ ಇದ್ದೇವು. ಆದರೆ ನಿನ್ನೆ ಬೇರೆ ಕಾರ್ಯದ ನಿಮಿತ್ತವಾಗಿ ಕಾರ್ಯಕ್ರಮಕ್ಕೆ ಹೋಗಿಲ್ಲ. ಇದರ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
Kshetra Samachara
28/09/2021 03:08 pm