ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಸಿಎಂ ಅವರಿಂದ ದೂರ ಉಳಿದ ಮಾಜಿಸಿಎಂ: ಬೊಮ್ಮಾಯಿ, ಶೆಟ್ಟರ್ ನಡುವೆ ಡಿಸ್ಟೆನ್ಸ್ ಮೆಂಟೈನ್..!

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ‌ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವಾರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರೂ ಕೂಡ ಈ ಭಾಗದ ನಾಯಕರು ಮಾತ್ರ ಯಾಕೋ‌ ದುರವೇ ಉಳಿದುಕೊಂಡಿದ್ದಾರೆ.

ಹೌದು..ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಸೋಮವಾರ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರು ಕಾರ್ಯಕ್ರಮಗಳಿಂದ ದೂರ ಉಳಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬಾಣತಿಕಟ್ಟೆಯಲ್ಲಿ ನಡೆದ ವಿವಿಧ ಠಾಣೆಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದ ಆಹ್ವಾನಿತರಲ್ಲಿ ಶಾಸಕ ಜಗದೀಶ ಶೆಟ್ಟರ್ ಅವರ ಹೆಸರಿತ್ತು. ಆದರೂ, ಅವರು ಧಾರವಾಡದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ತೆರಳಿದ್ದರು.

ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿದ್ದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು, ನಂತರ ಸಭೆಗೆ ತೆರಳಿದ್ದರು. ಸ್ವಾಭಿಮಾನ ಬಿಟ್ಟು ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸಚಿವನಾಗುವುದಿಲ್ಲ' ಎಂದು ಹೇಳಿದ್ದ ಶೆಟ್ಟರ್ ಈಗ ಸಿಎಂ ಬಸವರಾಜ ಬೊಮ್ಮಾಯಿಯವರ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳದೇ ಇರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Edited By : Shivu K
Kshetra Samachara

Kshetra Samachara

28/09/2021 04:06 pm

Cinque Terre

50.44 K

Cinque Terre

12

ಸಂಬಂಧಿತ ಸುದ್ದಿ