ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿಂದು ಹಬ್ಬದ ವಾತಾವರಣ! ಮುನೇನಕೊಪ್ಪ

ಹುಬ್ಬಳ್ಳಿ: ಮೈಸೂರು ಚಾಮುಂಡೇಶ್ವರಿ ಜಾತ್ರೆಯಂತೆ, ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ. ಪಾಟೀಲ ಮುನೇನಕೊಪ್ಪ ಹೇಳಿದರು.

ವಸತಿ ಇಲಾಖೆ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನು ಕಳೆದ 20 ವರ್ಷಗಳಿಂದ ಮನೆಗಳ ಹಕ್ಕುಪತ್ರ ಗಳಿಗಾಗಿ ಕೊಳಚೆ ಪ್ರದೇಶದ ಹೋರಾಟ ಮಾಡಿದ್ದಾರೆ‌. ಯಾವುದೇ ಜಾತಿ ಅಂತಸ್ತು ನೋಡದೇ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ವಸತಿ ಸಚಿವರಾದ ವಿ. ಸೋಮಣ್ಣ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

02/10/2021 05:22 pm

Cinque Terre

21.18 K

Cinque Terre

0

ಸಂಬಂಧಿತ ಸುದ್ದಿ