ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜಿಪಂ, ತಾಪಂನತ್ತ ಗುರಿನೆಟ್ಟ ಬಿಜೆಪಿ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ ಇದೀಗ ಧಾರವಾಡ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಯಲ್ಲೂ ಕಮಲ ಅರಳಿಸಲು ಸಜ್ಜಾಗಿದೆ ಬಿಜೆಪಿ.

ಹೌದು! ಇನ್ನೇನು ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳಿಗೆ ಚುನಾವಣೆ ಜರುಗಲಿದೆ. ಅದಕ್ಕಾಗಿ ಬಿಜೆಪಿ ಈಗಿನಿಂದಲೇ ತೆರೆಮರೆಯ ಕಸರತ್ತು ಬಿರುಸಾಗಿ ಆರಂಭಿಸಿದೆ. ಜಿಲ್ಲಾ ಪಂಚಾಯ್ತಿವಾರು ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಈಗಿನಿಂದಲೇ ಮತದಾರರ ಮನವೊಲಿಸುವ ಕಸರತ್ತು ನಡೆಸುತ್ತಿದೆ.

ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಇಂದು ಉಪ್ಪಿನ ಬೆಟಗೇರಿ ಜಿಲ್ಲಾ ಪಂಚಾಯ್ತಿಗೆ ಸಂಬಂಧಿಸಿದಂತೆ ಸಹಲ್ ಎಂಬ ಕಾರ್ಯಕ್ರಮ ನಡೆಸಲಾಗಿದ್ದು, ಕಾರ್ಯಕ್ರಮದಲ್ಲಿ ಉಪ್ಪಿನ ಬೆಟಗೇರಿ ಜಿಲ್ಲಾ ಪಂಚಾಯ್ತಿಗೆ ಸಂಬಂಧಿಸಿದಂತೆ ಪ್ರಮುಖರನ್ನು ಕರೆಯಿಸಿ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲೂ ಬಿಜೆಪಿಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

07/10/2021 10:49 pm

Cinque Terre

40.68 K

Cinque Terre

1

ಸಂಬಂಧಿತ ಸುದ್ದಿ