ಹುಬ್ಬಳ್ಳಿ: ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದ ಪಾಳಮ್ಮ ಎಂಬ ಮಹಿಳೆಯ ಮೇಲೆ ಮಧ್ಯರಾತ್ರಿ ಅತ್ಯಾಚಾರಕ್ಕೆ ಯತ್ನಿಸಿ ಪೆಟ್ರೋಲ್ ಹಾಕಿ ಸುಟ್ಟ ಅಮಾನವೀಯ ಕೃತ್ಯ ಏಸಗಿರುವುದನ್ನು ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಶಹರ ಘಟಕದ ವತಿಯಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು.
ದಲಿತ ಮಹಿಳೆಯರ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇಂತಹ ದುಷ್ಕರ್ಮಿಗಳ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಜರುಗಿಸಬೇಕು ಎಂದು ಆಗ್ರಹಿಸಿ ಮೇಣದ ಬತ್ತಿ ಹಿಡಿದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು. ಇನ್ನೂ ಮಹಿಳೆಯರಿಗೆ ರಕ್ಷಣೆ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
Kshetra Samachara
11/10/2021 06:23 pm