ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮಹಿಳೆಯರಿಗೆ ಸಿಗಲಿ ಸೂಕ್ತ ಭದ್ರತೆ ಅಪರಾಧಿಯನ್ನು ನೇಣು ಕುಣಿಕೆಗೇರಿಸಿ !

ಕುಂದಗೋಳ : ಇತ್ತೀಚೆಗೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ನಡೆದ ಅಹಿತಕರ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ವಿಮೋಚನೆ ಸಮಿತಿ ವತಿಯಿಂದ ಕುಂದಗೋಳ ಪಟ್ಟಣದ ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿವರೆಗೆ ಪಾದಯಾತ್ರೆ ಮಾಡಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಸೌಲಭ್ಯ ಕಲ್ಪಿಸುವಂತೆ ತಹಶೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ದಿನೇ ದಿನೇ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚತ್ತಲಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ ಅದರಲ್ಲೂ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಹಿಳೆ ಅತ್ಯಾಚಾರವನ್ನು ತಿರಸ್ಕರಿಸಿದಾಗ ನಡೆದ ಘಟನೆ ನಿಜಕ್ಕೂ ಹೇಯಕರ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರ ಗಮನಿಸಿ ತೀಕ್ಷ್ಣ ಕಾನೂನು ರೂಪಿಸಿ ಗಲ್ಲಿಗೇರಿಸಿ ಹಾಗೂ ಆರೋಪಿಗಳ ಹೆಡೆಮುರಿ ಕಟ್ಟುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

11/10/2021 06:31 pm

Cinque Terre

23.58 K

Cinque Terre

0

ಸಂಬಂಧಿತ ಸುದ್ದಿ