ಧಾರವಾಡ : ಕಳೆದ ಅಕ್ಟೋಬರ್ 4 ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದ ದಲಿತ ಮಹಿಳೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ, ದಲಿತ ಸಂಘರ್ಷ ಸಮಿತಿ ಸಂಘಟನೆ ಕಾರ್ಯಕರ್ತರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ದಲಿತ ಕುಟುಂಬಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹೀಗಾಗಿ ದಲಿತ ಕುಟುಂಬಗಳ ರಕ್ಷಣೆ ಸಿಗಬೇಕಾದರೆ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಒತ್ತಾಯಿಸಿ, ಈ ಮೂಲಕ ಅತ್ಯಾಚಾರಿಗಳ ವಿರುದ್ದ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಗ್ರಹಿಸಿದರು.
ಈ ವೇಳೆ ಲಕ್ಷ್ಮಣ ದೊಡಮನಿ, ಸುಧೀರ ಮುದೋಳ ಸೇರಿದಂತೆ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
12/10/2021 02:24 pm