ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಣೆ

ಅಣ್ಣಿಗೇರಿ : ತಾಲೂಕಿನಾಧ್ಯಂತ ಸೋಮವಾರ ಗುಡುಗು, ಸಿಡಿಲು ಸಹಿತ ಸುರಿದ ಧಾರಾಕಾರ ಮಳೆಗೆ ಸಿಲುಕಿ ಮೃತಪಟ್ಟ ರೈತನ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಬುಧವಾರ ರಾತ್ರಿ ಬೇಟಿ ನೀಡಿದರು.

ಮೃತ ರೈತ ತಾಲೂಕಿನ ಸೈದಾಪೂರ ಗ್ರಾಮದ ಸಂಗಪ್ಪ ವಾರದ ನ ಪತ್ನಿ ನೀಲವ್ವ ವಾರದ ಅವಳಿಗೆ ವಿಪತ್ತು ಪರಿಹಾರ ನಿಧಿ ಯೋಜನೆಯಲ್ಲಿ 5 ಲಕ್ಷ ಮೊತ್ತದ ಪರಿಹಾರ ಧನದ ಚೆಕ್ ನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿತರಣೆ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಮಂಜುನಾಥ ಅಮಾಸಿ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

14/10/2021 10:34 am

Cinque Terre

13.87 K

Cinque Terre

0

ಸಂಬಂಧಿತ ಸುದ್ದಿ