ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಐಸಿಯುನಲ್ಲಿದೆ! ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ಅವಸಾನದತ್ತ ಸಾಗಿದೆ. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಐಸಿಯುನಲ್ಲಿದೆ. ಮುಂದೆ ಅವರ ಹೋರಾಟದಿಂದ ಸಂಪೂರ್ಣ ಅವಸಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಆರೋಪಿಸಿದರು.

ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಹಾನಗಲ್ ಉಪ ಚುನಾವಣೆ ಹಿನ್ನೆಲೆ ಇದೇ 17 ರಂದು ಪ್ರಚಾರ ಕೈಗೊಳ್ಳುವೆ. 21, 22 ರಂದು ಸಿಂದಗಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುವೆ. 2 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದರು.

ಇನ್ನು, ಪ್ರಚಾರದಿಂದ ಬಿಎಸ್ ವೈ ದೂರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಸಮಯ ಇದೆ. ಅವರು ಪ್ರಚಾರ ಸಹ ಕೈಗೊಳ್ಳುತ್ತಾರೆ ಎಂದರು.

ಡಿ.ಕೆ. ಶಿವಕುಮಾರ ವಿರುದ್ಧ ಉಗ್ರಪ್ಪ ಹಾಗೂ ಸಲೀಂ ಆರೋಪ‌ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ತಂತ್ರ ಕುತಂತ್ರ ನಡೆದಿವೆ. ಎಲ್ಲವನ್ನೂ ಆರೋಪ ಮಾಡಿ ಆಮೇಲೆ ಕ್ಷಮೆ ಕೇಳಿದ್ರೆ ಹೇಗೆ? ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ನಲ್ಲಿ ಎರಡು ಗುಂಪುಗಳಿವೆ. ಸಿದ್ದರಾಮಯ್ಯ ಹಾಗೂ ಡಿಕೆ ಗುಂಪು ಅವರ ಮಧ್ಯೆ ಸಿಎಂ ಹುದ್ದೆಗೆ ಪೈಟ್ ಶುರುವಾಗಿದೆ. ಉಗ್ರಪ್ಪ, ಸಿದ್ದರಾಮಯ್ಯರ ಪಟ್ಟದ ಶಿಷ್ಯ ಅವರೇ ಡಿಕೆಶಿ ವಿರುದ್ದ ಆರೋಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ ಬಗ್ಗೆ ಅವಹೇಳನ ಮಾಡಲು ಸಿದ್ದರಾಮಯ್ಯ ಬೆಂಬಲಿಗರು ನಿಂತಿದ್ದಾರೆ. ಕಾಂಗ್ರೆಸ್ ಪಕ್ಷ ಅವಸಾನದತ್ತ ಸಾಗಿದೆ ಎಂದರು.

ಡಿಕೆಶಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಆಸ್ತಿ ವಿಚಾರವಾಗಿ ಸೊಗಡು ಶಿವಣ್ಣ ಆರೋಪಕ್ಕೆ ಶೆಟ್ಟರ್ ಪ್ರತಿಕ್ರಿಯೆ ನೀಡಿದ ಅವರು ಅವರವರ ಅಭಿಪ್ರಾಯ ಅವರು ಹೇಳುತ್ತಾರೆ. ಅದರ ಬಗ್ಗೆ ನಾನು ಮಾತನಾಡುವುದು ಸೂಕ್ತ ಅಲ್ಲ ಎಂದರು.

Edited By : Shivu K
Kshetra Samachara

Kshetra Samachara

15/10/2021 02:30 pm

Cinque Terre

25.59 K

Cinque Terre

8

ಸಂಬಂಧಿತ ಸುದ್ದಿ