ಕಲಘಟಗಿ: ಕಲಘಟಗಿಯೇ ನನ್ನ ಕರ್ಮಭೂಮಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಲಘಟಗಿ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, "ಎರಡು ದಶಕದಿಂದ ಕಲಘಟಗಿಯೊಂದಿಗೆ ಸಂಪರ್ಕ ಹೊಂದಿದ್ದೇನೆ. ಕಳೆದ ಚುನಾವಣೆಯಲ್ಲಿ ಹಾಗೂ ಚುನಾವಣೆ ಬಳಿಕ ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಹೋಗಿ ಜನರ ಬೇಕು-ಬೇಡಗಳಿಗೆ ಸ್ಪಂದಿಸಿದ್ದೇನೆ. ಜನರ ಒತ್ತಾಸೆಯ ಮೇರೆಗೆ ಕಲಘಟಗಿಯಿಂದ ಸ್ಪರ್ಧಿಸಲು ಮುಂದಾಗಿದ್ದೇನೆ. ಹೀಗಾಗಿ ಕಲಘಟಗಿ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಉದ್ಭವಿಸದು. ಕಲಘಟಗಿ ಕ್ಷೇತ್ರದಲ್ಲಿಯೇ ಮನೆ ನಿರ್ಮಿಸುತ್ತಿದ್ದೇನೆ. ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮದ ನೈಜ್ಯ ಸಮಸ್ಯೆಗಳನ್ನು ಪಟ್ಟಿ ಮಾಡುತ್ತಿದ್ದೇನೆ. ಈಗಾಗಲೇ ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಅನೇಕ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ" ಎಂದು ತಿಳಿಸಿದ್ದಾರೆ.
ಕಲಘಟಗಿ ಕ್ಷೇತ್ರವನ್ನು ಮಾದರಿಯಾಗಿಸುವ ಗುರಿ ಹೊಂದಿದ್ದೇನೆ. ಪ್ರತಿ ಹಳ್ಳಿ ಹಳ್ಳಿಗೆ ಹೋದಾಗಲೂ ಜನರು ನನ್ನ ಪರವಾಗಿ ನಿಲ್ಲುತ್ತಿದ್ದಾರೆ. ಇಂಥ ಪ್ರಸಂಗದಲ್ಲಿ ನಾನು ಕ್ಷೇತ್ರ ತೊರೆಯುವ ಪ್ರಶ್ನೆ ಉದ್ಭವಿಸದು. ಛಬ್ಬಿ ಅವರು ಕಲಘಟಗಿಯಿಂದ ಸ್ಪರ್ಧಿಸಲಾರರು ಎನ್ನುವ ಸುಳ್ಳು ಸುದ್ದಿ ಹರಿಯ ಬಿಡುತ್ತಿದ್ದಾರೆ. ಕಾಂಗ್ರೆಸ್‌ನ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಪಕ್ಷವೂ ಅಭ್ಯರ್ಥಿಯಾಗಿ ಘೋಷಿಸಿ, ಟಿಕೆಟ್ ಕೊಟ್ಟು ನನ್ನನ್ನು ಹರಿಸುವ ವಿಶ್ವಾಸವಿದೆ. ಈ ಬಗ್ಗೆ ಯಾವುದೇ ಸಂದೇಹವಿಲ್ಲ. ದಾರಿ ತಪ್ಪಿಸುವವರಿಗೆ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಛಬ್ಬಿ ಹೇಳಿದ್ದಾರೆ.
Kshetra Samachara
15/10/2021 09:54 pm