ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕುಬಿಹಾಳದಲ್ಲಿ ಅಭಿವೃದ್ಧಿ ಕಾಮಗಾರಿ ಶಾಸಕಿ ಕುಸುಮಾವತಿ ಚಾಲನೆ

ಕುಂದಗೋಳ : ಪ್ರತಿಯೊಂದು ಗ್ರಾಮದ ಅಭಿವೃದ್ಧಿ ದೃಷ್ಕಾಕೋನದಲ್ಲಿ ನಾನು ಶಾಸಕಿಯಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಇಂದು ಕುಬಿಹಾಳ ಗ್ರಾಮದ ಸಮಗ್ರ ಅಭಿವೃದ್ಧಿ ಕಾಮಗಾರಿಗಾಗಿ ಭೂಮಿ ಪೂಜೆ ನೆರವೇರಿಸಲು ನಿಮ್ಮೂರು ಅವಕಾಶ ನೀಡಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ಅವರು ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆಗೆ ತಡೆಗೋಡೆ ನಿರ್ಮಾಣ, ದೇವಸ್ಥಾನದ ಗೋಪುರ ನಿರ್ಮಾಣ ಕಾಮಗಾರಿ, ಮುಸ್ಲಿಂ ಸಮಾಜದ ದರಗಾ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಉಮೇಶ್ ಹೆಬಸೂರ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಸ್ಯರು ಗ್ರಾಮದ ಗುರು ಹಿರಿಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/10/2021 02:14 pm

Cinque Terre

7.65 K

Cinque Terre

0

ಸಂಬಂಧಿತ ಸುದ್ದಿ