ಧಾರವಾಡ : ಚನ್ನಬಸವೇಶ್ವರ ನಗರ ಹಾಗೂ ಉಳವಿ ಚನ್ನಬಸವೇಶ್ವರ ನಗರದಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ತೆರೆದ ಚರಂಡಿ ಹಾಗೂ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರು ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ನಂತರ ನೆರವೇರಿದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯ ಶಿವು ಹಿರೇಮಠ್, ಸವಿತಾ ಅಮರಶೆಟ್ಟಿ, ವಿಧಾನಪರಿಷತ್ ಸದಸ್ಯ ವಿ. ಎಸ್.ಸಂಕನೂರ, ನಾಗೇಶ್ ಕಲಬುರ್ಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Kshetra Samachara
16/10/2021 06:04 pm