ಹುಬ್ಬಳ್ಳಿ: ಮತಾಂತರ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಪ್ರಕರಣದ ಕುರಿತು ಶಾಸಕ ಅರವಿಂದ ಬೆಲ್ಲದ್ ಹಾಗೂ ಹು-ಧಾ ಪೊಲೀಸ್ ಆಯುಕ್ತ ಲಾಭುರಾಮ್ ಸುಧೀರ್ಘ ಚರ್ಚೆ ಮಾಡಿದ್ದಾರೆ.
ಹೌದು.. ಚರ್ಚೆ ಬಳಿಕ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದು, ಪ್ರಕರಣದ ಕುರಿತಂತೆ ಈಗಾಗಲೇ ಪೊಲೀಸ್ ಆಯುಕ್ತರು ಭರವಸೆ ನೀಡಿದ್ದಾರೆ. ಮತಾಂತರಿಯನ್ನು ಬಂಧಿಸುವಂತೆ ಭರವಸೆ ನೀಡಿದ್ದಾರೆ. ಹೀಗಾಗಿ ಸಧ್ಯ ಅವರ ಭರವಸೆಯಂತೆಯೇ ನಾವು ಪ್ರತಿಭಟನೆಯನ್ನ ಕೈಬಿಡುತ್ತಿದ್ದೇವೆ. ಈ ಪ್ರಕರಣದ ಕುರಿತಂತೆ ರಾಜ್ಯದ ನಾಯಕರ ಗಮನಕ್ಕೂ ತಂದಿದ್ದೇವೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದ್ದಾಗಲೂ ಒಬ್ಬ ಮತಾಂಧ ಆರೋಪಿಯನ್ನ ಬಂಧಿಸುವಂತೆ ಹೋರಾಟ ಮಾಡುವ ಪರಿಸ್ಥಿತಿ ಬಂದಿದ್ದು ನಮ್ಮ ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನೂ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವ್ಯವಸ್ಥೆಯ ವಿರುದ್ಧ ಶಾಸಕ ಅರವಿಂದ ಬೆಲ್ಲದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Kshetra Samachara
17/10/2021 11:00 pm