ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೋಧನಾ ಸಿಬ್ಬಂದಿ ಸಮಸ್ಯೆ ಆಲಿಸಿ ಸಮಸ್ಯೆ ಬಗೆಹರಿಸೋದಾಗಿ ಹೇಳಿದ ರಾಜ್ಯಪಾಲ

ಧಾರವಾಡ: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬೋಧನಾ ಸಿಬ್ಬಂದಿ ಆಡಳಿತ ಭವನದ ಎದುರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಭೇಟಿ ನೀಡಿದರು.

ಬಡ್ತಿ ಇನ್ನಿತರ ವಿಷಯಗಳಲ್ಲಿ ತಾರತಮ್ಯ ನೀತಿ, ಯುಜಿಸಿ ನಿಯಮ ಪಾಲಿಸದಿರುವುದು, ಅಧಿಕಾರಿಗಳ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ, ರಜೆ ಸೌಲಭ್ಯಗಳಲ್ಲಿ ಕೊರತೆ ಸೇರಿದಂತೆ ಇನ್ನೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಬೋಧನಾ ಸಿಬ್ಬಂದಿ ಧರಣಿ ನಡೆಸುತ್ತಿದ್ದರು. ಧರಣಿ ನಿರತರನ್ನು ಭೇಟಿ ಮಾಡಿದ ರಾಜ್ಯಪಾಲರು ಅವರ ಸಮಸ್ಯೆಗಳನ್ನು ಆಲಿಸಿದರು. ನಂತರ 15 ದಿನಗಳ ಒಳಗಾಗಿ ಯುಜಿಸಿ ಕಮಿಟಿ ಸದಸ್ಯರು, ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯವರ ಸಭೆ ಕರೆದು ಅವರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

ರಾಜ್ಯಪಾಲರು 15 ದಿನಗಳ ಒಳಗಾಗಿ ಬೋಧನಾ ಸಿಬ್ಬಂದಿಯ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನಾನಿರತ ಸಿಬ್ಬಂದಿ ತಾತ್ಕಾಲಿಕವಾಗಿ ತಮ್ಮ ಧರಣಿಯನ್ನು ಕೈಬಿಟ್ಟರು.

Edited By : Nagesh Gaonkar
Kshetra Samachara

Kshetra Samachara

18/10/2021 03:15 pm

Cinque Terre

38.84 K

Cinque Terre

0

ಸಂಬಂಧಿತ ಸುದ್ದಿ