ಧಾರವಾಡ: ಧಾರವಾಡ ತಾಲೂಕಿನ ಮುರಕಟ್ಟಿ ಗ್ರಾಮದ ದಲಿತ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದಲಿತ ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಜಾನಪದ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಮುರಕಟ್ಟಿ ಗ್ರಾಮದ ದಲಿತ ಯುವಕನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ದೂರು ದಾಖಲು ಮಾಡಿದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಇನ್ಸ್ ಪೆಕ್ಟರ್ ಕೂಡ ದಲಿತರ ವಿರೋಧಿಯಾಗಿಯೇ ನಡೆದುಕೊಳ್ಳುತ್ತಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಸಂಜೆ ಡಿಸಿ ಕಚೇರಿ ಎದುರು ಪ್ರತಿಭಟನಾಕಾರರು ಅರೆಬೆತ್ತಲೆ ಪ್ರತಿಭಟನೆ ಕೂಡ ನಡೆಸಿದರು.
Kshetra Samachara
18/10/2021 10:33 pm