ಹುಬ್ಬಳ್ಳಿ: ನನಗೆ ಯಾವುದೇ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ. ಸಿಎಂ ಅಂದ್ರೆ ಕಾಮನ್ ಮ್ಯಾನ್ ಎಂದಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಯಿತು.
ಹೌದು. ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾನಗಲ್ ಉಪಚುನಾವಣೆ ಮುಗಿಸಿ ರಾತ್ರಿ ಹುಬ್ಬಳ್ಳಿಗೆ ಆಗಮಿಸುವಾಗ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಯಿತು. ಶಿಗ್ಗಾಂವ ತಾಲೂಕಿನ ತಡಸ ಕ್ರಾಸ್‌ನಿಂದ ಹುಬ್ಬಳ್ಳಿವರೆಗೂ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಾರೆ.
ಬೇರೆ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಕಾಶ ನೀಡದೇ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ರೋಡ್ ಕ್ರಾಸ್ ವೇಳೆಗೆ ಸರ್ವಿಸ್ ರಸ್ತೆಯಲ್ಲೇ ವಾಹನಗಳನ್ನು ತಡೆದು ನಿಲ್ಲಿಸಿದ್ದಾರೆ.
ನಾನು ಕಾಮನ್ ಮ್ಯಾನ್ ಅನ್ನೋ ಸಿಎಂಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಕಿತ್ತಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಇದೇನಾ ಸಿಎಂ ಸರಳತೆ? ರಾತ್ರಿ ವೇಳೆ ಬೇರೆ ಪ್ರಯಾಣಿಕರಿಗೆ ತೊಂದರೆ ಕೊಡುವುದು ಸರಳ ಸಿಎಂಗೆ ಶೋಭೆ ತರುತ್ತದೆಯೇ.? ಸಿಎಂ ಬಸವರಾಜ ಬೊಮ್ಮಾಯಿ ಅವರೇ ಕಾಮನ್ ಮ್ಯಾನ್ ಪ್ರಶ್ನೆ ಸ್ಪಷ್ಟೀಕರಣ ನೀಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Kshetra Samachara
21/10/2021 09:04 am