ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ! ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ರಾಷ್ಟ್ರದ ಆಂತರಿಕ ಭದ್ರತೆ ಹಾಗೂ‌ ಶಾಂತಿಪಾಲನೆಗೆ ತಮ್ಮ ಪ್ರಾಣ ನೀಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವ ದಿನ ಇಂದಿನದಾಗಿದೆ. ದೇಶದ ಪ್ರಗತಿಗೆ ಶಾಂತಿ ಅವಶ್ಯಕ. ಶಾಂತಿ ಇಲ್ಲದಿದ್ದರೆ ದೇಶದ ಪ್ರಗತಿ ಇಲ್ಲ. ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ಹಳೇ ಸಿ.ಆರ್ . ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣ‌ ದಿನಾಚರಣೆಯಲ್ಲಿ ವೇದಿಕೆಯಲ್ಲಿ ಮಾತನಾಡಿದ ಅವರು,

ವಿಶ್ವದ ಹಲವು ರಾಷ್ಟ್ರಗಳು ಆಂತರಿಕ ಕ್ಷೋಭೆ, ಭಯೋತ್ಪಾದಕರ ಕೈಗೆ ಸಿಲುಕಿ ಅಲ್ಲಿನ ಮನುಷ್ಯರ ಬದುಕು ಶಾಂತಿಯುತವಾಗಿಲ್ಲ. ದೇಶದ ಎಲ್ಲಾ ಹಂತದ ಪೊಲೀಸರು ಜನರು ಭಯರಹಿತ ಜೀವನ ನಡಿಸಲು ಶ್ರಮ ಪಡುತ್ತಾರೆ. ಸಾಮಾಜಿಕ ಸ್ವಾಥ್ಯ ಕೆಡಿಸುವ, ವಿದೇಶದಿಂದ ಎದುರಾಗುವ ಆಂತರಿಕ ಭದ್ರತಾ ಸವಾಲುಗಳನ್ನು ಎದುರಿಸುತ್ತಾರೆ. ನಾಗರಿಕರು ಕಾನೂನು ಕಾಪಾಡುವಲ್ಲಿ ಪೊಲೀಸರಿಗೆ ಸಹರಿಸಬೇಕು. ಪೊಲೀಸರು ಕುಟುಂಬವನ್ನು ಮರೆತು ಹಗಲಿರುಳಿ ದುಡಿಯುತ್ತಾರೆ. ರಾಜ್ಯ ಸರ್ಕಾರ ಪೊಲೀಸರಿಗೆ ದೊರಕಬೇಕಾದ ಸವಲತ್ತುಗಳನ್ನು ನೀಡಲು ಸಿದ್ದವಿದೆ. ಇಲಾಖೆಯಲ್ಲಿ ನೆಲೆಗುದಿಗೆ ಬಿದ್ದ ಹಲವು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಪೊಲೀಸರ ಸೇವೆ ಉತ್ತಮ ಗೊಳಿಸಲು ಪ್ರಯತ್ನ ಮಾಡಲಾಗಿದೆ. ಹಿರಿಯ ಅಧಿಕಾರಿಗಳು ಹಂತದಲ್ಲಿ ಮಾತ್ರ ಪದೋನ್ನತೆ ಎಂಬ ಭಾವನೆ ಕೆಳ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಇತ್ತು. ಆದರೆ ಕೆಳ ಹಂತದ ಸಿಬ್ಬಂದಿಗಳಿಗೆ ಪದೋನ್ನತಿ ನೀಡಲಾಗಿದೆ.

ಸಧ್ಯ 16 ಸಾವಿರ ಪೊಲೀಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆರೋಗ್ಯ ಭಾಗ್ಯ ಯೋಜನೆಯಡಿ ಪೊಲೀಸರು ಚಿಕಿತ್ಸೆ ಪಡೆಯಲು ಅನುದಾನ ಒದಗಿಸಲಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ಹಲವು ಸುಧಾರಣೆಗಳನ್ನು ತರಲಾಗಿದೆ. ಕಾನೂನಿನ ಬಲವನ್ನು ಪೊಲೀಸರಿಗೆ ನೀಡಲಾಗುತ್ತಿದೆ. ಯುವಕರು ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ತಡೆಗಾಗಿ ಕಾಯ್ದೆಯನ್ನು ತರಲಾಗಿದೆ. ಗ್ಯಾಬ್ಲಿಂಗ್ ಕ್ಲಬ್‌ಗಳನ್ನು ವಿರುದ್ಧ ಸಶಕ್ತ ಕಾನೂನು ತರಲಾಗಿದೆ. ಎಫ್.ಎಸ್.ಎಲ್ ಲ್ಯಾಬ್ ಗಳನ್ನು ಪ್ರಾದೇಶಿಕ ಹಂತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆಫಿಸರ್ ಆನ್ ಕ್ರೈಮ್ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ 10 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಮುಂದಿನ ವರ್ಷದಲ್ಲಿ 11 ಸಾವಿರ ಮನೆ ನಿರ್ಮಾಣಕ್ಕೆ ಯೋಜಿಸಲಾಗಿದೆ. ಪೊಲೀಸ್‌ರು ಹೆಣ್ಣು ಮಕ್ಕಳ ಸುರಕ್ಷತೆ ಆಧ್ಯತೆ ನೀಡಬೇಕು. ಪೊಲೀಸ್ ಠಾಣೆಗಳು ಜನಸ್ನೇಹಿ ಆಗಬೇಕು. ಕಾನೂನಿಗೆ ಬದ್ದವಾಗಿ ಕೆಲಸ ನಿರ್ವಹಿಸಬೇಕು. ಪ್ರತಿ ಕಾಲೇಜಿನಲ್ಲಿ ‌ಹೆಣ್ಣುಮಕ್ಕಳಿಗೆ ಸ್ವರಕ್ಷಣೆಗೆ ತರಬೇತಿ ನೀಡಲಾಗುವುದು ಎಂದರು.

Edited By : Shivu K
Kshetra Samachara

Kshetra Samachara

21/10/2021 10:48 am

Cinque Terre

16.48 K

Cinque Terre

0

ಸಂಬಂಧಿತ ಸುದ್ದಿ