ಧಾರವಾಡ: ಮರಾಠಾ ಸಮುದಾಯವನ್ನು 3ಬಿ ಯಿಂದ 2ಎ ಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಮರಾಠಾ ಕ್ರಾಂತಿ ಮೋರ್ಚಾದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೀದರದಿಂದ ಮೈಸೂರಿನವರೆಗೆ 21 ಜಿಲ್ಲೆಗಳಲ್ಲಿ ಮೌನ ಮೆರವಣಿಗೆ ನಡೆಸಲಾಗಿತ್ತು. 2012ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶಂಕ್ರಪ್ಪ ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಸಮಾಜ ಸ್ಥಿತಿಗಳನ್ನು ಅಧ್ಯಯನ ಮಾಡಿ ಮರಾಠಾ ಸಮಾಜದ ಜನತೆ ರಾಜ್ಯದಲ್ಲಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಆದ್ದರಿಂದ ಈ ಸಮುದಾಯವನ್ನು 2ಎ ಗೆ ಸೇರಿಸಬಹುದು ಎಂದು ವರದಿ ಸಲ್ಲಿಸಿದ್ದಾರೆ. ಯಡಿಯೂರಪ್ಪನವರು ಸಿಎಂ ಆಗಿದ್ದ ಸಂದರ್ಭದಲ್ಲಿ ಮರಾಠಾ ಸಮುದಾಯವನ್ನು 2ಎ ಸೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಆ ಕೆಲಸ ಆಗಿಲ್ಲ.
ಸದ್ಯ ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮರಾಠಾ ಸಮುದಾಯವನ್ನು 2ಎ ಗೆ ಸೇರಿಸಬೇಕು ಎಂದು ಆಗ್ರಹಿಸಲಾಯಿತು.
Kshetra Samachara
21/10/2021 12:58 pm