ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಉಪಚುನಾವಣೆ ಒಳಗಾಗಿಯೇ 2 ಎ ಮೀಸಲಾತಿ ಸೂಕ್ತ ನಿರ್ಣಯ ಕೈಗೊಳ್ಳಬೇಕು: ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಹಿನ್ನೆಲೆಯಲ್ಲಿ, ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಇಂದು ಹುಬ್ಬಳ್ಳಿ ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ನಂತರ ಮಾಧ್ಯಮ ಮೂಲಕ ಮಾತಾನಾಡಿದ ಅವರು, ಉತ್ತರ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು, ಕೇಂದ್ರ ಸರ್ಕಾರವು ಸಹ ಚನ್ನಮ್ಮ ಜಯಂತಿಯನ್ನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು‌.

ಪಂಚಮಸಾಲಿ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾನಾಡಿ, ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ ಚುನಾವಣೆ ಒಳಗಾಗಿಯೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು, ಈಗಾಗಲೆ ಹಳ್ಳಿ ಹಳ್ಳಿಗಳಲ್ಲಿ ನಮ್ಮ ಅಭಿಯಾನ ನಡೆಯುತ್ತಿದೆ,ಶೀಘ್ರದಲ್ಲೆ ಸರ್ಕಾರ ವರದಿ ತರಸಿ ಮೀಸಲಾತಿ ನಿರ್ಧಾರ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಒತ್ತಾಯ ಮಾಡಿದರು.

Edited By : Manjunath H D
Kshetra Samachara

Kshetra Samachara

23/10/2021 06:22 pm

Cinque Terre

18.42 K

Cinque Terre

3

ಸಂಬಂಧಿತ ಸುದ್ದಿ