ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕ್ರೈಸ್ತ ಸಮುದಾಯದ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಚರ್ಚ್ ಮೇಲೆ ದಾಳಿ ಹಾಗೂ ಕ್ರೈಸ್ತ ಸಮುದಾಯದ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ರೈಸ್ತರ ಮೇಲಿನ ಇಂತಹ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸರಾರ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯ ಕ್ರೈಸ್ತ ಸಮುದಾಯ ಒತ್ತಾಯಿಸಿದೆ.

ಹುಬ್ಬಳ್ಳಿ ಧಾರವಾಡ ಕ್ರಿಶ್ಚಿಯನ್ ಪಾಸ್ಟರ್ ಅಸೋಸಿಯೇಷನ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು‌‌. ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲ ಬೆಂಬಲಿತ ಪ್ರತಿಭಟನೆಯಲ್ಲಿ ನೂರಾರು ಕ್ರೈಸ್ತ ಸಮುದಾಯದವರು ಪಾಲ್ಗೊಂಡಿದ್ದರು.

ಇತ್ತೀಚಿನ ದಿನಗಳಲ್ಲಿ ಚರ್ಚ್ ಹಾಗೂ ಕ್ರೈಸ್ತ ಸಮುದಾಯದವರ ಮೇಲೆ ಹಲ್ಲೆ ಹಾಗೂ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಾರ್ಥನೆ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವ ಯತ್ನಗಳು ನಡೆಯುತ್ತಿವೆ. ನಾವು ಯಾವುದೇ ಜಾತಿಕಾರಣ ಮಾಡುತ್ತಿಲ್ಲ. ಅಥವಾ ಒತ್ತಾಯದ ಮತಾಂತರ ಮಾಡುತ್ತಿಲ್ಲ. ಆದರೂ ನಮ್ಮ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಇತರರಿಗೆ ಇರುವ ಸಂವಿಧಾನ ಬದ್ಧ ಧಾರ್ಮಿಕ ಸ್ವಾತಂತ್ರ್ಯ ನಮಗೂ ಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

25/10/2021 09:32 pm

Cinque Terre

55.16 K

Cinque Terre

22

ಸಂಬಂಧಿತ ಸುದ್ದಿ