ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎರಡೂ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ಗೆಲುವು ನಿಶ್ಚಿತ: ಶೆಟ್ಟರ್ ವಿಶ್ವಾಸ

ಹುಬ್ಬಳ್ಳಿ: ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸಾಕಷ್ಟು ಬೆಂಬಲ ಇದೆ. ಅಲ್ಲದೇ ಎರಡು ಕ್ಷೇತ್ರದಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲುವನ್ನು ಸಾಧಿಸುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡೂ ಮೂರು ಬಾರಿ ನಾನು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಸಾಕಷ್ಟು ಜನಬೆಂಬಲ ಬಿಜೆಪಿಗೆ ಇರುವುದರಿಂದ ಗೆಲುವು ನಿಶ್ಚಿತ ಎಂದರು.

ವರ್ಟಿಕಲ್ ಡೆವಲಪ್ಮೆಂಟ್ ಕುರಿತು ಮಾತನಾಡಿದ ಅವರು, ಇದರ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳನ್ನು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಕೂಡ ವರ್ಟಿಕಲ್ ಡೆವಲಪ್ಮೆಂಟ್ ಬಗ್ಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚೆ ಮಾಡಿದ್ದೇನೆ. ಈ ಬಗ್ಗೆ ಇನ್ನೂ ಹೆಚ್ಚಿನ ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

Edited By : Manjunath H D
Kshetra Samachara

Kshetra Samachara

30/10/2021 01:53 pm

Cinque Terre

31.85 K

Cinque Terre

2

ಸಂಬಂಧಿತ ಸುದ್ದಿ