ಹುಬ್ಬಳ್ಳಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು.
ಹುಬ್ಬಳ್ಳಿಯ ದಾಜೀಬಾನ ಪೇಟೆಯ ತುಳಜಾ ಭವಾನಿ ದೇವಸ್ಥಾನದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು ಪರಸ್ಪರ ಸಿಹಿ ಹಂಚುವ ಮೂಲಕ ಕಾಂಗ್ರೆಸ್ ವಿಜಯೋತ್ಸವ ಆಚರಣೆ ಮಾಡಿ ಶ್ರೀನಿವಾಸ ಮಾನೆಯವರಿಗೆ ಶುಭ ಹಾರೈಸಿದರು...
Kshetra Samachara
02/11/2021 05:43 pm