ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಂಗು ಪಡೆದ ಕವಿವ ಸಂಘದ ಚುನಾವಣೆ: ಬೆಲ್ಲದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ

ಧಾರವಾಡ: ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆ ನವೆಂಬರ್ 28 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಡಾ.ಪಾಟೀಲ ಪುಟ್ಟಪ್ಪ‌, ಕೃಷ್ಣಾ ಜೋಶಿ ಮತ್ತು ಮೋಹನ ನಾಗಮ್ಮನವರ ಬಳಗದಿಂದ ಚಂದ್ರಕಾಂತ ಬೆಲ್ಲದ ಸಾರಥ್ಯದಲ್ಲಿ ಎಲ್ಲಾ ಕ್ಷೇತ್ರದ ಸಾಧಕರ ಬಣ ಈ ಬಾರಿ ಸ್ಪರ್ಧೆ ಮಾಡಲಿದೆ ಎಂದು ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಅಭ್ಯರ್ಥಿ ಪ್ರಕಾಶ ಉಡಿಕೇರಿ ಹೇಳಿದರು.

ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಹಾಗೂ ಪ್ರಕಾಶ ಉಡಿಕೇರಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚಂದ್ರಕಾಂತ ಬೆಲ್ಲದ, ಉಪಾಧ್ಯಕ್ಷ ಸ್ಥಾನಕ್ಕೆ ಸದಾನಂದ ಶಿವಳ್ಳಿ, ಕೋಶಾಧ್ಯಕ್ಷ ಸ್ಥಾನಕ್ಕೆ ಸತೀಶ್ ತುರಮರಿ ಸೇರಿದಂತೆ ಇತರೆ ಸಾಧಕರಿಗೆ ನಮ್ಮ ಬಣದಿಂದ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದವೆ ಎಂದರು.

ಈ ಚುನಾವಣೆಯಲ್ಲಿ ನಮ್ಮ ಬಣದಿಂದ ಒಳ್ಳೆಯ ಕೆಲಸ ಕಾರ್ಯ ಮಾಡುವ ಅಭ್ಯರ್ಥಿಗಳು ಇದ್ದಾರೆ. ಎಲ್ಲರೂ ವಿಚಾರ ಮಾಡಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗುತ್ತದೆ. ಈಗಾಗಲೇ ನಾವು ಸಾಮಾಜಿಕ ಕೆಲಸ ಕಾರ್ಯ ಮಾಡಿ ಜನರ ಮನಸ್ಸಿನಲ್ಲಿ ಇದ್ದೇವೆ. ಅದರಂತೆ ಈ ಬಾರಿ ನಮ್ಮ ಬಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು.

Edited By : Nagesh Gaonkar
Kshetra Samachara

Kshetra Samachara

02/11/2021 06:51 pm

Cinque Terre

27.23 K

Cinque Terre

0

ಸಂಬಂಧಿತ ಸುದ್ದಿ