ಹುಬ್ಬಳ್ಳಿ: ದಲಿತರು ಹೊಟ್ಟೆಪಾಡಿಗೆ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಸಿದ್ದರಾಮಯ್ಯ ಹೇಳಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ಎಸ್.ಸಿ ಮೋರ್ಚಾದ ವತಿಯಿಂದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ಹೊಟ್ಟೆಪಾಡಿಗಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆಂದು ಆಕ್ರೋಶ ಹೊರಹಾಕಿದರು.
ಕೂಡಲೇ ಮಾಜಿ ಸಿಎಂ ಸಿದ್ಧರಾಮಯ್ಯನವರು ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.
Kshetra Samachara
12/11/2021 02:31 pm