ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಿಂದ ದಿಡೀರ್ ದೆಹಲಿಗೆ ಹಾರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್...!

ಹುಬ್ಬಳ್ಳಿ: ಬಿಟ್ ಕಾಯಿನ್ ಪ್ರಕರಣ, ಸಿಎಂ ಬದಲಾವಣೆ ವಿಚಾರ ಕುರಿತಂತೆ ತೀವ್ರ ಚರ್ಚೆ ನಡೆಯುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದಿಢೀರ್ ದೆಹಲಿ ಪ್ರಯಾಣ ಬೆಳೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.ಇತ್ತೀಚಿನ ರಾಜ್ಯ ರಾಜಕೀಯ ಬೆಳವಣಿಗೆ ನಡುವೆ

ಹುಬ್ಬಳ್ಳಿಯಿಂದ ಮಾಜಿ ಸಿಎಂ ಜಗದೀಶ್ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹುಬ್ಬಳ್ಳಿ- ಗಾಜಿಯಾಬಾದ್ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

ಹೈ ಕಮಾಂಡ್ ಬುಲಾವ್ ಹಿನ್ನೆಲೆಯಿಂದ ದೆಹಲಿಗೆ ಜಗದೀಶ್ ಶೆಟ್ಟರ್ ಪ್ರಯಾಣ ಬೆಳೆಸಿದ್ದಾರೆ. ಸ್ಟಾರ್ ಏರಲೈನ್ಸ್ ವಿಮಾನದಲ್ಲಿ ದೆಹಲಿಗೆ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಯಿಂದ ಪ್ರಯಾಣಿಸಿದ್ದಾರೆ.

ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಶೆಟ್ಟರ್ ದೆಹಲಿ ಪ್ರಯಾಣ ಮಹತ್ವ ಪಡೆದುಕೊಂಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಯಿಂದ ಮರಳಿದ ಮೇಲೆ ಶೆಟ್ಟರ್ ದೆಹಲಿಗೆ ತೆರಳಿರುವದು ತೀವ್ರ ಕುತೂಹಲ ಮೂಡಿಸಿದೆ.

Edited By : Nirmala Aralikatti
Kshetra Samachara

Kshetra Samachara

12/11/2021 04:50 pm

Cinque Terre

40.55 K

Cinque Terre

7

ಸಂಬಂಧಿತ ಸುದ್ದಿ