ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ:ಅನ್ಯಾಯ ಎಸಗಿದವರ ವಿರುದ್ಧ ಕ್ರಮ ಕೈಗೊಂಡು ಶಿಕ್ಷೆ ನೀಡಿ

ಕುಂದಗೋಳ : ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಕೆಲಸ ಕಾರ್ಯಗಳು ನಡೆಯುತ್ತಿವೆ.

ಇದಕ್ಕೆ ಉದಾಹರಣೆ ಎಂಬಂತೆ ತ್ರಿಪುರಾ ರಾಜ್ಯದಲ್ಲಿ ಮುಸ್ಲಿಮರ ಮೇಲೆ ಮತ್ತು ಮುಸ್ಲಿಮರು ಪ್ರಾರ್ಥನಾ ಮಾಡುವ ಮದರಸಾಗಳ ಮೇಲೆ ಹಲ್ಲೆ ನಡೆದರೂ, ಅಲ್ಲಿಯ ಸರಕಾರ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಮುಂದಾಗಿಲ್ಲ, ಮುಸ್ಲಿಮರು ಈ ದೇಶದ ಪ್ರಜೆಗಳೇ ಅಲ್ವಾ ? ಅವರಿಗೆ ಈ ದೇಶದಲ್ಲಿ ಜೀವಿಸುವ ಹಕ್ಕು ಇಲ್ವಾ ? ಎಂದು ಪ್ರಶ್ನಿಸಿದ ಕುಂದಗೋಳ ಪಟ್ಟಣದ ಅಂಜುಮನ್ ಎ ಇಸ್ಲಾಂ ಕಮೀಟಿ ಹಾಗೂ ಜೈ ಕರ್ನಾಟಕ ಟಿಪ್ಪು ಸುಲ್ತಾನ್ ಕಮೀಟಿಯವರು ಶುಕ್ರವಾರ ಸಾಯಂಕಾಲ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮುಸ್ಲಿಂ ಸಮಾಜದ ಮೇಲೆ ಪದೇ ಪದೇ ಅನ್ಯಾಯ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಮುಸ್ಲಿಂ ಸಮಾಜದವರು ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದವವರ ಮೇಲೆ ಶಿಸ್ತು ಕ್ರಮಗಳನ್ನು ಜರುಗಿಸಬೇಕಾಗಿ ತ್ರಿಪುರ ಸರ್ಕಾರಕ್ಕೆ ತಹಶೀಸಲ್ದಾರ ಮೂಲಕ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

13/11/2021 02:23 pm

Cinque Terre

13.65 K

Cinque Terre

0

ಸಂಬಂಧಿತ ಸುದ್ದಿ