ಧಾರವಾಡ: ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳನ್ನೊಳಗೊಂಡ ವಿಧಾನ ಪರಿಷತ್ ಚುನಾವಣೆಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಸೂಚನೆ ಹೊರಡಿಸಿದ್ದು, ನಾಳೆಯಿಂದ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಾಳೆ ನಾಮಪತ್ರ ಸಲ್ಲಿಸಬಹುದು, ನ.23 ನಾಮಪತ್ರ ಸಲ್ಲಿಸಲು ಕೊನೆಯ ದಿನ, ನ.24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.26 ನಾಮಪತ್ರಗಳನ್ನು ವಾಪಸ್ ಪಡೆಯುವ ಕೊನೆಯ ದಿನವಾಗಿರುತ್ತದೆ ಎಂದರು.
ಡಿ.10ಕ್ಕೆ ಮತದಾನ ನಡೆಯಲಿದ್ದು, ಡಿ.14 ರಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ನಡೆಯಲಿದೆ. ಮೂರೂ ಜಿಲ್ಲೆ ಸೇರಿ 504 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಒಟ್ಟು 7503 ಜನ ಮತದಾರರಿದ್ದು, ಅದರಲ್ಲಿ 3659 ಪುರುಷರು, 3844 ಮಹಿಳಾ ಮತದಾರರಿದ್ದಾರೆ. ಚುನಾವಣೆ ಸಂಬಂಧ ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ ಎಂದರು.
Kshetra Samachara
15/11/2021 05:53 pm