ಧಾರವಾಡ: ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷೀದ್ ಅವರು ಹಿಂದುತ್ವದ ಕುರಿತಾಗಿ ಬರೆದಿರುವ ಹೇಳಿಕೆ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಲ್ಮಾನ್ ಖುರ್ಷೀದ್ ವಿರುದ್ಧ ಧಿಕ್ಕಾರ ಕೂಗಿ, ಅವರ ಭಾವಚಿತ್ರ ದಹಿಸಿ ಆಕ್ರೋಶ ಹೊರಹಾಕಿದರು.
ದೇಶದಲ್ಲಿ ಸೌಹಾರ್ಧತೆ ಕದಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತ ಬಂದಿದೆ. ಹಿಂದೂ ಸಮುದಾಯದ ವಿರುದ್ಧವಾಗಿ ಅವಹೇಳನಕಾರಿಯಾಗಿ ಬರೆದ ಸಲ್ಮಾನ್ ಖರ್ಷೀದ್ ಪರವಾಗಿ ಕಾಂಗ್ರೆಸ್ ಮಾತನಾಡುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
Kshetra Samachara
15/11/2021 07:39 pm