ಹುಬ್ಬಳ್ಳಿ: ಶ್ರೀರಾಮಸೇನಾದ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ ಅವರ ಬಂಧನವನ್ನು ಖಂಡಿಸಿ ಶ್ರೀರಾಮಸೇನಾ ವತಿಯಿಂದ ಹುಬ್ಬಳ್ಳಿಯ ತಹಶಿಲ್ದಾರರ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.
ಕೋಲಾರದಲ್ಲಿ ದತ್ತ ಮಾಲಾಧಾರಿಗಳ ಮೇಲೆ ಅನ್ಯಕೋಮಿನ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಹಿನ್ನಲೆಯಲ್ಲಿ ಕೋಲಾರ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರು ಭಾಗವಹಿಸಲು ಹೋಗುತ್ತಿದ್ದ ಸಂದರ್ಭದಲ್ಲಿ ಬಂಧನ ಮಾಡಿ ನಿರ್ಬಂಧ ಹೇರಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ಪ್ರತಿಭಟನಾನಿರತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ದತ್ತ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸಬೇಕು ಎಂದು ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
18/11/2021 05:23 pm