ಧಾರವಾಡ: ಧಾರವಾಡ ಸ್ಥಳೀಯ ಸಂಘ, ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಕಳೆದ ಬಾರಿ ಧಾರವಾಡದಿಂದ ಸ್ಪರ್ಧಿಸಿ ಜಯ ಗಳಿಸಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಸಹೋದರ ಪ್ರದೀಪ್ ಶೆಟ್ಟರ್ ಅವರಿಗೆ ಈ ಬಾರಿಯೂ ಟಿಕೆಟ್ ನೀಡಿ ಅದೃಷ್ಟ ಪರೀಕ್ಷೆಗಿಳಿಸಲಾಗಿದೆ.
ಧಾರವಾಡ, ಹಾವೇರಿ, ಗದಗ ಸೇರಿ ಎರಡು ವಿಧಾನ ಪರಿಷತ್ ಸ್ಥಾನಗಳಿದ್ದು, ಆ ಪೈಕಿ ರಾಜಕೀಯ ಪಕ್ಷಗಳು ತಲಾ ಇಬ್ಬಿಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದಾಗಿದೆ. ಆದರೆ, ಇಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುವುದರಿಂದ ಅದು ಸಾಧ್ಯವಾಗದೇ ಇರಬಹುದು.
Kshetra Samachara
19/11/2021 10:17 pm