ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯ ಘಟಕದ ಅಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.
ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಮತದಾನ ಆರಂಭಗೊಂಡಿದೆ. ಉಳಿದ ತಾಲೂಕುಗಳಲ್ಲಿ ತಹಶೀಲ್ದಾರ್ ಕಚೇರಿಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಟ್ಟು 5,199 ಮತದಾರರಿದ್ದು ಈ ಪೈಕಿ ಧಾರವಾಡದಲ್ಲಿ 1790, ಹುಬ್ಬಳ್ಳಿಯಲ್ಲಿ 1512, ಕುಂದಗೋಳದಲ್ಲಿ 755, ಅಣ್ಣಿಗೇರಿಯಲ್ಲಿ 388, ನವಲಗುಂದದಲ್ಲಿ 303, ಕಲಘಟಗಿಯಲ್ಲಿ 209, ಅಳ್ನಾವರದಲ್ಲಿ 154 ಹಾಗೂ ಹುಬ್ಬಳ್ಳಿ ಗ್ರಾಮೀಣದಲ್ಲಿ 88 ಮತಗಳಿವೆ.
ಪರಿಷತ್ತು ನೀಡಿರುವ ಭಾವಚಿತ್ರ ಸಹಿತ ಗುರುತಿನ ಚೀಟಿ ತರದವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಸರ್ಕಾರದಿಂದ ಮಾನ್ಯತೆ ಹೊಂದಿರುವ, ಭಾವಚಿತ್ರ ಇರುವ ಗುರುತಿನ ಚೀಟಿ ತೋರಿಸಿದರೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
Kshetra Samachara
21/11/2021 09:40 am