ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಕೆ

ಧಾರವಾಡ: ಧಾರವಾಡ ಜಿಲ್ಲೆಯ ಸ್ಥಳೀಯ ಸಂಘ, ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಸಿದರು.

ಈ ಚುನಾವಣೆಯು ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳನ್ನೊಳಗೊಂಡಿದ್ದು, ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವ ಸಿ.ಸಿ.ಪಾಟೀಲ ಹಾಗೂ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಸಾಥ್ ನೀಡಿದರು.

ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ಹೊರಬಂದ ಪ್ರದೀಪ ಶೆಟ್ಟರ್, ಈ ಬಾರಿಯೂ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟಾರೆಯಾಗಿ ಚುನಾವಣಾ ಕಣ ರಂಗು ಪಡೆದುಕೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೂಡ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ.

Edited By : Manjunath H D
Kshetra Samachara

Kshetra Samachara

23/11/2021 12:41 pm

Cinque Terre

33.46 K

Cinque Terre

5

ಸಂಬಂಧಿತ ಸುದ್ದಿ