ಧಾರವಾಡ: ಮೂರು ಜಿಲ್ಲೆಗಳ ವ್ಯಾಪ್ತಿಯ ಹೊಂದಿರುವ ಅಖಂಡ ಧಾರವಾಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯ ಕಾವು ಈಗ ಜೋರಾಗಿದ್ದು, ಇಂದು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸಲೀಂ ಅಹ್ಮದ್ ಚುನಾವಣಾ ಅಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ನಾಮ ಪತ್ರ ಸಲ್ಲಿಕೆಗೂ ಮುನ್ನ ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಗಣೇಶನ ಆರ್ಶೀವಾದ ಪಡೆದುಕೊಂಡರು. ಬಳಿಕ ಮಂದಿರದಿಂದ ಪಾದಯಾತ್ರೆಯ ಮೂಲಕ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದ ಮಾರ್ಗವಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾ ಚುನಾವಣಾ ಅಧಿಕಾರಿಯಾದ ನಿತೇಶ ಪಾಟೀಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾಜಿ ಸಚಿವ ಎಚ್.ಕೆ.ಪಾಟೀಲ್, ಶಾಸಕರಾದ ಶ್ರೀನಿವಾಸ ಮಾನೆ, ಪ್ರಸಾದ್ ಅಬ್ಬಯ್ಯ, ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವರು ಹಾಜರಿದ್ದು, ಪಕ್ಷದ ಅಭ್ಯರ್ಥಿ ಸಲೀಂ ಅಹ್ಮದ್‌ರವರಿಗೆ ಸಾಥ್ ನೀಡಿದರು.
Kshetra Samachara
23/11/2021 05:09 pm