ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಿ.ಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆಯಿಲ್ಲ: ಟೆಂಗಿನಕಾಯಿ

ಹುಬ್ಬಳ್ಳಿ: ವಿಧಾನ‌ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಎಂಬುವಂತ ಪ್ರಶ್ನೆಯೇ ಇಲ್ಲ. ಇದು ಹೈ ಕಮಾಂಡ್ ನಿರ್ಧಾರ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆಗೆ ಮೀಲಾಪಿ ಖುಸ್ತಿ ಮಾಡಲು ಭಾರತೀಯ ಜನತಾ ಪಕ್ಷ ಸಿದ್ಧವಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಾದ್ಯಂತ ವಿಧಾನ ಪರಿಷತ್ ಚುನಾವಣೆಗೆ 20 ಅಭ್ಯರ್ಥಿಗಳನ್ನು ನಿಲ್ಲಿಸಲಾಗಿದೆ. ಅಲ್ಲದೇ ಐದು ಕಡೆಗಳಲ್ಲಿ ಐದು ಜನ ಅಭ್ಯರ್ಥಿಗಳನ್ನು ನಿಲ್ಲಿಸಲಾಗಿದೆ. ಇದೆಲ್ಲಾ ಹೈ ಕಮಾಂಡ್ ನಿರ್ಧಾರ ಎಂದರು.

ಬಿಜೆಪಿ ಬಂಡಾಯ ಅಭ್ಯರ್ಥಿಗಳ ಮನವೊಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಕಾರ್ಯ ಚುರುಕುಗೊಂಡಿದೆ. ಅಲ್ಲದೆ ಬಂಡಾಯವನ್ನು ಶಮನಗೊಳಿಸಿ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆ ಗೆಲುವನ್ನು ಭಾರತೀಯ ಜನತಾ ಪಾರ್ಟಿಯು ಪಡೆಯಲಿದೆ ಎಂದರು.

Edited By : Manjunath H D
Kshetra Samachara

Kshetra Samachara

26/11/2021 09:12 am

Cinque Terre

16.56 K

Cinque Terre

1

ಸಂಬಂಧಿತ ಸುದ್ದಿ