ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಒಂದು ವರ್ಷ ಕಳೆದ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿಮ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಸಂಯುಕ್ತ ರೈತ ಕಿಸಾನ್ ಮೋರ್ಚಾ ಸದಸ್ಯರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿ, ಸಂಸತ್ತಿನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ಅಲ್ಲದೇ ಅಕಾಲಿಕ ಮಳೆಗೆ ರೈತ ಸಮುದಾಯ ನಲುಗಿದ್ದು, ಬೆಳೆನಷ್ಟ ಅನುಭವಿಸಿದ ಎಲ್ಲಾ ರೈತರಿಗೆ ಸರ್ಕಾರಗಳು ಕೂಡಲೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಲಾಯಿತು.
Kshetra Samachara
26/11/2021 10:47 pm