ಹುಬ್ಬಳ್ಳಿ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ ಮಾಡುವ ವೇಳೆ ಮಾತಿನ ಚಕಮಕಿ ನಡೆದಿದೆ. ಕೈ ಕೈ ಮಿಲಾಯಿಸುವ ಹಂತಕ್ಕೆ ಎನೂ ಆಗಿಲ್ಲ ಎಂದರು.
ಡಿಸೆಂಬರ್ ೧೦ರ ನಂತರ ಅವರಿಬ್ಬರ ಬಗ್ಗೆ ಪಕ್ಷದ ನಾಯಕರು ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಿದ್ದಾರೆ. ಇಲ್ಲಿ ಯಾವುದೇ ನಾಯಕರ ಮಧ್ಯದಲ್ಲಿ ಮನಸ್ತಾಪ ಹಾಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟನೆ ನೀಡಿದರು.
Kshetra Samachara
01/12/2021 01:17 pm