ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಜಾತಿ ರಾಜಕಾರಣ ಮುನ್ನೆಲೆಗೆ ಬರುವುದಿಲ್ಲ. ಇಲ್ಲಿ ಯಾವುದೇ ಜಾತಿಯ ಪ್ರಶ್ನೆ ಬರುವುದಿಲ್ಲ ಎಂದು ವಿಧಾನ ಪರಿಷತ್ ಅಭ್ಯರ್ಥಿ ಪ್ರದೀಪ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಇಲ್ಲಿ ಯಾವುದೇ ಜಾತಿ ರಾಜಕಾರಣದ ಪ್ರಶ್ನೆಯೇ ಇಲ್ಲ ಎಂದರು.
ಹಾವೇರಿಯಿಂದ ಪಕ್ಷೇತರ ಅಭ್ಯರ್ಥಿ ಸ್ಪರ್ಧೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇದರಿಂದ ನಮಗೆ ಯಾವುದೇ ಹಾನಿಯಾಗುವುದಿಲ್ಲ. ಎಲ್ಲ ಜಾತಿಯವರು ನನ್ನ ಜೊತೆಗೆ ಇದ್ದಾರೆ. ಅಲ್ಲದೇ ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೆಚ್ಚಿನ ಮತವನ್ನು ಪಡೆಯುವ ವಿಶ್ವಾಸ ನನಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
01/12/2021 03:40 pm