ಧಾರವಾಡ: ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡಿದ ಕಾರ್ಮಿಕರಿಗೆ ಬಾಕಿ ಇರುವ ವೇತವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಹಾಗೂ ಕೂಲಿ ಕೆಲಸ ಮಾಡಿದ ಕಾರ್ಮಿಕರು ಧಾರವಾಡ ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮೀಣ ಭಾಗದ ಕೂಲಿಕಾರರಿಗೆ ಅನೂಕೂಲವಾಗಲೆಂದು ಸರ್ಕಾರವು ತಂದಿರುವ ನರೇಗಾ ಯೋಜನೆಯಲ್ಲಿ ಜನರಿಗೆ ಕೆಲಸವೂ ಇಲ್ಲ ಕೂಲಿಯು ಇಲ್ಲವಾಗಿದೆ. ಧಾರವಾಡ ತಾಲೂಕಿನ ತೇಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಗುಳೇದಕೂಪ್ಪ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಿ ಮೂರು ತಿಂಗಳು ಕಳೆದರೂ ಕಾರ್ಮಿಕರಿಗೆ ವೇತನ ಬಿಡುಗಡೆಯಾಗಿಲ್ಲ. ಧಾರವಾಡ ಜಿಲ್ಲೆಯಾದ್ಯಂತ 1 ಕೋಟಿ 65 ಲಕ್ಷ ವೇತನ ಬಾಕಿ ಇದೆ. ಬಾಕಿ ಇರುವ ಈ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
Kshetra Samachara
03/12/2021 06:51 pm