ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಇದೀಗ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ನಾಳೆ (ಡಿ.5ರಂದು) ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸದ್ಯ ಧಾರವಾಡ ಜಿಲ್ಲಾ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ನಿರ್ಬಂಧ ಹೇರಿದ್ದು, ಆ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ.
ವಿನಯ್ ಹಾಗೂ ಅವರ ಪತ್ನಿ ಶಿವಲೀಲಾ ಅವರು ವೈವಾಹಿಕ ಜೀವನದಲ್ಲಿ ನಾಳೆ 'ಬೆಳ್ಳಿ ಸಂಭ್ರಮ'ಕ್ಕೆ (25ನೇ ವರ್ಷ) ಕಾಲಿಡಲಿದ್ದು ತಮ್ಮ ನೆಚ್ಚಿನ ನಾಯಕನನ್ನು ಸಮಾವೇಶದ ನಂತರ ಅಭಿನಂದಿಸಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲ ಮೇಲೆ ನಿಂತಿದ್ದಾರೆ.
Kshetra Samachara
04/12/2021 10:19 pm