ಹುಬ್ಬಳ್ಳಿ: ಕರ್ನಾಟಕ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದೇವೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ಎನ್.ಎಚ್.ಕೋನರೆಡ್ಡಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈಗಾಗಲೇ ನಮ್ಮ ವರಿಷ್ಠರು ತಿಳಿಸಿದಂತೆ ನಾವು ಹಾವೇರಿ, ಗದಗ, ಧಾರವಾಡ ಜಿಲ್ಲೆಯ ಮುಖಂಡರೊಂದಿಗೆ ಸಭೆ ನಡೆಸಿ ಸಲೀಂ ಅಹ್ಮದ್ ಅವರಿಗೆ ಬೆಂಬಲ ಸೂಚಿಸಲು ತೀರ್ಮಾನಿಸಲಾಯಿತು. ಹೀಗಾಗಿ ಜಿಲ್ಲೆಯಲ್ಲಿನ ಜೆಡಿಎಸ್ ನ 1000 ಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ ಎಂದರು.
ಇನ್ನೂ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿರುವುದು ಸ್ವಾಗತಾರ್ಹ. ಆದರೆ ಅಧಿವೇಶನದಲ್ಲಿ ನಂಜುಂಡಪ್ಪ ವರದಿ, ಪರಮಶಿವಪ್ಪ ವರದಿ ಜಾರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸುವುದಿಲ್ಲ. ಹಾಗಾಗಿ ಸುವರ್ಣಸೌಧದಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೆಂದು ಒತ್ತಾಯಿಸಿದರು.
Kshetra Samachara
08/12/2021 04:46 pm